Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯರ್ಮೂತ್ ಇವುಗಳೂ ಇವುಗಳ ಗ್ರಾಮಗಳೂ, ಲಾಕೀಷ್ ಊರೂ ಇದರ ಪ್ರಾಂತ್ಯಗಳೂ, ಅಜೇಕವೂ ಅದರ ಗ್ರಾಮಗಳೂ; ಇವು ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಜನೋಹ, ಅದುಲ್ಲಾಮ್ ಇವುಗಳೂ ಇವುಗಳ ಗ್ರಾಮಗಳೂ ಲಾಕೀಷ್ ಊರೂ ಇದರ ಪ್ರಾಂತಗಳೂ ಅಜೇಕವೂ ಅದರ ಗ್ರಾಮಗಳೂ ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ತಗ್ಗಿನವರೆಗೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಜನೋಹ, ಅದುಲ್ಲಾಮ್, ಅದರ ಸುತ್ತಲಿದ್ದ ಚಿಕ್ಕ ನಗರಗಳು, ಲಾಕೀಷ್ ಅದರ ಸುತ್ತಲಿದ್ದ ಹೊಲಗಳು, ಅಜೇಕ, ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳು. ಹೀಗೆ ಯೆಹೂದ ಪ್ರಾಂತ್ಯದ ಜನರು ಬೇರ್ಷೆಬದಿಂದ ಹಿಡಿದು ಹಿನ್ನೋಮ್ ಕಣಿವೆಯ ತನಕ ಬೇರೆಬೇರೆ ಪಟ್ಟಣಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಜಾನೋಹ, ಅದುಲ್ಲಾಮ್ ಮತ್ತು ಇವುಗಳ ಗ್ರಾಮಗಳೂ ಲಾಕೀಷ್ ಊರೂ ಇದರ ಪ್ರಾಂತಗಳೂ ಅಜೇಕವೂ ಅದರ ಗ್ರಾಮಗಳೂ ಯೆಹೂದದವರ ನಿವಾಸಸ್ಥಾನಗಳು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮ್ ತಗ್ಗಿನವರೆಗೂ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:30
18 ತಿಳಿವುಗಳ ಹೋಲಿಕೆ  

ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.


ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.


ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಾಯೇಲಿನ ನಾಯಕರು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.


ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.


ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.


ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.


ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.


ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.


ಲಾಕೀಷ್, ಬೊಚ್ಕತ್, ಎಗ್ಲೋನ್,


ಲಿಬ್ನದ ಅರಸನು - 1 ಅದುಲ್ಲಾಮಿನ ಅರಸನು - 1


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.


ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು,


ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು