Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೇಷೂವ ಇವರೊಡನೆ [ಯೆಹೂದ ದೇಶಕ್ಕೆ] ಬಂದ ಯಾಜಕರೂ ಲೇವಿಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ: ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:1
22 ತಿಳಿವುಗಳ ಹೋಲಿಕೆ  

ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,


“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,


ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:


ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.


ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.


ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.


ಅಮರ್ಯ, ಮಲ್ಲೂಕ್, ಹಟ್ಟೂಷ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು