ನೆಹೆಮೀಯ 12:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈ ಲೇವಿಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು. ಅಧ್ಯಾಯವನ್ನು ನೋಡಿ |
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.