Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾದದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂವಿುಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:44
17 ತಿಳಿವುಗಳ ಹೋಲಿಕೆ  

ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,


ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.


ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.


ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.


ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು