ನೆಹೆಮೀಯ 12:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿ ಹಾಗು ಶುದ್ಧೀಕರಣ ಸಂಬಂಧದಲ್ಲಿ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿಯೂ ಶುದ್ಧೀಕರಣಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಯಾಜಕರೂ ಲೇವಿಯರೂ ತಮ್ಮ ದೇವರಿಗೋಸ್ಕರ ತಮ್ಮ ಕೆಲಸಗಳನ್ನು ಮಾಡಿದರು. ಶುದ್ಧೀಕರಣ ಆಚರಣೆಯ ಮೂಲಕ ಜನರನ್ನು ಶುದ್ಧರನ್ನಾಗಿ ಮಾಡಿದರು. ಗಾಯಕರೂ ದ್ವಾರಪಾಲಕರೂ ತಮ್ಮತಮ್ಮ ಕೆಲಸಗಳನ್ನು ಮಾಡಿದರು. ದಾವೀದನು ಮತ್ತು ಸೊಲೊಮೋನನು ಆಜ್ಞಾಪಿಸಿದ್ದ ಪ್ರಕಾರವೇ ಅವರು ಎಲ್ಲವನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಇದಲ್ಲದೆ ದಾವೀದನೂ, ಅವನ ಮಗನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ, ದ್ವಾರಪಾಲಕರೂ ತಮ್ಮ ದೇವರ ಕಾವಲನ್ನೂ, ಶುದ್ಧೀಕರಣದ ಕಾವಲನ್ನೂ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿ |