Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲೇವಿಯರು - ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:8
12 ತಿಳಿವುಗಳ ಹೋಲಿಕೆ  

ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.


ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಲೆಬಾನ, ಹಗಾಬ, ಸಲ್ಮೈ ಸಂತಾನದರು,


ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.


ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು.


ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74


ಲೇವಿಯರಲ್ಲಿ - ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು