ನೆಹೆಮೀಯ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
11 ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
11 ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು.
11 ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, “ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?” ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.