ನೆಹೆಮೀಯ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು. ಅಧ್ಯಾಯವನ್ನು ನೋಡಿ |