ನೆಹೆಮೀಯ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ, ಈ ನಾಡಿನಲ್ಲಿ ವಾಸಿಸುತ್ತಿದ್ದ ಟೈರಿನವರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್‍ದಿನದಲ್ಲಿ ಜೆರುಸಲೇಮಿನಲ್ಲೇ ಮಾರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರೂ ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್‍ದಿನದಲ್ಲಿ ಯೆರೂಸಲೇವಿುನಲ್ಲೇ ಮಾರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಮೀನುಗಳನ್ನೂ, ಎಲ್ಲಾ ಸರಕುಗಳನ್ನೂ ತೆಗೆದುಕೊಂಡು ಬಂದು ಸಬ್ಬತ್ ದಿನದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ಟೈರಿನವರು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.