Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಸಬ್ಬತ್‍ದಿನ ಪ್ರಾರಂಭವಾಗುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳಲ್ಲಿ ಕತ್ತಲಾಗಿರುವಾಗಲೇ ಕದಗಳನ್ನು ಮುಚ್ಚಿಸಿ ಸಬ್ಬತ್ ದಿನವು ಗತಿಸುವದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಕಾವಲಿರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:19
7 ತಿಳಿವುಗಳ ಹೋಲಿಕೆ  

ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.


ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.


“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.


ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,


ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು