Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:22
26 ತಿಳಿವುಗಳ ಹೋಲಿಕೆ  

ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.


ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.


ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.


ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.


ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು