Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:25
21 ತಿಳಿವುಗಳ ಹೋಲಿಕೆ  

ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.


ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.


ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.


ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.


ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.


ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.


ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು