Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:26
10 ತಿಳಿವುಗಳ ಹೋಲಿಕೆ  

ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.


ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.


ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು