Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗಿರಲಾಗಿ, ನೀವೂ ಅನ್ಯಮಹಿಳೆಯರನ್ನು ಮದುವೆಮಾಡಿಕೊಂಡು, ಅದೇ ಘೋರವಾದ ದುಷ್ಕೃತ್ಯವನ್ನು ನಡೆಸಿ, ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳುವುದಿಲ್ಲ,” ಎಂದು ಅವರನ್ನು ಗದರಿಸಿದೆ.”ಅನ್ಯರ ಮಕ್ಕಳಿಗೆ ಹೆಣ್ಣು ಕೊಡಬಾರದು; ನಮಗಾಗಲಿ ನಮ್ಮ ಮಕ್ಕಳಿಗಾಗಲಿ ಅವರಿಂದ ಹೆಣ್ಣು ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಗೊಳ್ಳುವುದಾಗಿ ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣ ಮಾಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗಿರಲಾಗಿ ನೀವು ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ನಡಿಸಿ ದೇವರಿಗೆ ದ್ರೋಹಿಗಳಾಗುವದನ್ನು ನಾವು ಒಪ್ಪಿಕೊಳ್ಳಬೇಕೋ ಎಂದು ಅವರನ್ನು ಗದರಿಸಿ ಅವರಿಂದ - ಅನ್ಯರ ಮಕ್ಕಳಿಗೆ ಹೆಣ್ಣುಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು ಎಂಬ ಧರ್ಮವಿಧಿಯನ್ನು ಕೈಕೊಳ್ಳುವದಾಗಿ ದೇವರ ಹೆಸರಿನಲ್ಲಿ ಪ್ರಮಾಣಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀವು ವಿದೇಶಿ ಸ್ತ್ರೀಯರನ್ನು ಮದುವೆಮಾಡಿಕೊಂಡು, ನಮ್ಮ ದೇವರಿಗೆ ಅಪರಾಧಮಾಡಿ, ಅದೇ ಘೋರವಾದ ದುಷ್ಕೃತ್ಯವನ್ನು ಮಾಡಲು ನಾವು ಒಪ್ಪಿಕೊಳ್ಳುವುದಿಲ್ಲ ನಿಮ್ಮ ಮಾತು ಕೇಳಬಹುದೋ?” ಎಂದು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:27
5 ತಿಳಿವುಗಳ ಹೋಲಿಕೆ  

ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.


ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.


ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.


ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?


ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು