ನೆಹೆಮೀಯ 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದಕ್ಕಿಂತ ಮೊದಲು ಯಾಜಕ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಕಗೊಂಡಿದ್ದನು. ಇವನು ಟೋಬೀಯನ ಬೀಗನಾಗಿದ್ದುದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇವಿುಸಲ್ಪಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4-5 ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ವಿಚಾರಕನಾಗಿದ್ದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಮೀಪ ಬಂಧುವಾಗಿದ್ದನು. ಅಧ್ಯಾಯವನ್ನು ನೋಡಿ |