ನೆಹೆಮೀಯ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಅರಸನ ಪಾನಸೇವಕನಾಗಿದ್ದೆನು. ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರುಷದ ಚೈತ್ರಮಾಸದಲ್ಲಿ ಅರಸನು ದ್ರಾಕ್ಷಾರಸಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ. ಅಧ್ಯಾಯವನ್ನು ನೋಡಿ |