ನೆಹೆಮೀಯ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಮೇಲೆ ಜೆರುಸಲೇಮಿಗಾಗಿ ಮಾಡತಕ್ಕ ಕಾರ್ಯದ ಬಗ್ಗೆ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾರೆಂದು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆ. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆರೂಸಲೇವಿುಗೋಸ್ಕರ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂದು ಯಾರಿಗೂ ತಿಳಿಸದೆ ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ. ಅಧ್ಯಾಯವನ್ನು ನೋಡಿ |