ನೆಹೆಮೀಯ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ನಾನು ಅವರಿಗೆ - ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೋ; ಯೆರೂಸಲೇಮ್ ಪಟ್ಟಣವು ಹಾಳುಬಿದ್ದದೆ, ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇವಿುನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಹೋಗುವದು ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ. ಅಧ್ಯಾಯವನ್ನು ನೋಡಿ |