ನೆಹೆಮೀಯ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು - ಬನ್ನಿರಿ, ಕಟ್ಟೋಣ ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು. ಅಧ್ಯಾಯವನ್ನು ನೋಡಿ |