ನೆಹೆಮೀಯ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ರಾಜರ ಹತ್ತಿರದಲ್ಲೇ ಕುಳಿತುಕೊಂಡಿದ್ದಳು ರಾಣಿ. ರಾಜ, “ಪ್ರಯಾಣಕ್ಕೆ ನಿನಗೆ ಎಷ್ಟುಕಾಲಬೇಕು? ಯಾವಾಗ ಹಿಂದಿರುಗುವೆ,” ಎಂದು ವಿಚಾರಿಸಿದ. ನಾನು ಕಾಲವನ್ನು ಸೂಚಿಸಿದೆ. ಅವನು ಒಪ್ಪಿಕೊಂಡು ಹೋಗಿಬರಲು ಅಪ್ಪಣೆಕೊಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರಾಣಿಯು ಅರಸನ ಹತ್ತಿರದಲ್ಲೇ ಕೂತುಕೊಂಡಿದ್ದಳು. ಅರಸನು - ಪ್ರಯಾಣಕ್ಕೆ ನಿನಗೆಷ್ಟು ಕಾಲಬೇಕು? ಯಾವಾಗ ಹಿಂದಿರುಗುವಿ ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅವನು ಒಪ್ಪಿಕೊಂಡು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾಣಿಯು ರಾಜನ ಪಕ್ಕದಲ್ಲಿ ಕುಳಿತಿದ್ದಳು. ರಾಜನೂ ರಾಣಿಯೂ, “ನಿನಗೆ ಹೋಗಿ ಬರಲು ಎಷ್ಟು ಸಮಯ ಬೇಕಾಗುವುದು? ನೀನು ಹಿಂದಕ್ಕೆ ಯಾವಾಗ ಬರುವಿ?” ಎಂದು ವಿಚಾರಿಸಿದರು. ನನ್ನನ್ನು ಕಳುಹಿಸಲು ರಾಜನಿಗೆ ಸಂತೋಷವಿದ್ದುದರಿಂದ ನಾನೊಂದು ಸಮಯವನ್ನು ಸೂಚಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು. ಅಧ್ಯಾಯವನ್ನು ನೋಡಿ |