ನೆಹೆಮೀಯ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು. ಅಧ್ಯಾಯವನ್ನು ನೋಡಿ |