ನೆಹೆಮೀಯ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತಿಪ್ಪೆಬಾಗಲನ್ನು ಜೀರ್ಣೋದ್ಧಾರಮಾಡಿದವನು ಬೇತ್‍ಹಕ್ಕೆರೆವಿುನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತಿಪ್ಪೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಬೇತ್ ಹಕ್ಕೆರೆಮಿನ ನಾಡೊಡೆಯನೂ, ರೇಕಾಬನ ಮಗನೂ ಆದ ಮಲ್ಕೀಯನೂ, ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.