ನೆಹೆಮೀಯ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿ |
ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.