Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವನ ಆಚೆ ಅಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:16
18 ತಿಳಿವುಗಳ ಹೋಲಿಕೆ  

“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.


ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಲೊಹೇಷನ ಮಗನೂ ಆದ ಶಲ್ಲೂಮ ಮತ್ತು ಅವನ ಪುತ್ರಿಯರು.


ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು.


ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,


ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು.


ಹಲ್ಹೂಲ್, ಬೇತ್‌ಚೂರ್, ಗೆದೋರ್,


ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.


ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.


ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು.


ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.


ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.


ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.


ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು