Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ, ಜಕ್ಕೈಯ ಮಗನಾದ ಬಾರೂಕನು ಆಸಕ್ತಿ ಇಂದ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವನ ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಚಬ್ಬಾಯನ ಮಗನಾದ ಬಾರೂಕನು ಮುಂದಿನ ಭಾಗವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನ ತನಕ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಉತ್ಸಾಹದಿಂದ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:20
9 ತಿಳಿವುಗಳ ಹೋಲಿಕೆ  

ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.


ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.


ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.


ದಾನೀಯೇಲ್, ಗಿನ್ನೆತೋನ್, ಬಾರೂಕ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು