Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ದುರಸ್ತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವನ ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನಿಂದ ಆ ಮನೆಯ ಕೊನೆಯತನಕ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಎಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ, ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:21
8 ತಿಳಿವುಗಳ ಹೋಲಿಕೆ  

ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.


ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)


ಕೋಚನಿಂದ ಅನೂಬ್‌ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ.


ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು.


ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.


ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.


ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು