Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗ ಚಾದೋಕ್; ಮುಂದಕ್ಕೆ ತೆಕೋವದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಲ್ಲಿಂದ ಮುಂದಕ್ಕೆ ಗೋಡೆಯನ್ನು ಜೀರ್ಣೋದ್ಧಾರಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇವನ ನಂತರ ಊರೀಯನ ಮಗನಾದ ಮೆರೇಮೋತನು ಗೋಡೆಯನ್ನು ಕಟ್ಟಿದನು. (ಊರೀಯನು ಹಕ್ಕೋಚನ ಮಗ.) ಇದರ ಮುಂದಿನ ಭಾಗವನ್ನು ಬೆರೆಕ್ಯನ ಮಗನಾದ ಮೆಷುಲ್ಲಾಮನು ಕಟ್ಟಿದನು. (ಬೆರೆಕ್ಯನು ಮೆಷೇಜಬೇಲನ ಮಗ.) ಈ ಗೋಡೆಯ ನಂತರದ ಭಾಗವನ್ನು ಬಾನನ ಮಗನಾದ ಚಾದೋಕನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜೀರ್ಣೋದ್ಧಾರ ಮಾಡಿಸಿದವನು ಊರೀಯನ ಮಗನೂ, ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ, ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾಣನ ಮಗನಾದ ಚಾದೋಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:4
11 ತಿಳಿವುಗಳ ಹೋಲಿಕೆ  

ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.


ಬುನ್ನೀ, ಅಜ್ಗಾದ್, ಬೇಬೈ


ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,


ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು.


ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ಮೆಷೇಜಬೇಲ್, ಚಾದೋಕ್, ಯದ್ದೂವ,


ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)


ಇವನ ನಂತರ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್. ಇವನ ನಂತರ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡನು.


ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.


ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು