Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಲ್ಲಿಂದ ಮುಂದಕ್ಕೆ ತೆಕೋವದವರು ಗೋಡೆಯನ್ನು ದುರಸ್ತಿ ಮಾಡಿಸಿದರು. ಆದರೆ ತೆಕೋವದವರಲ್ಲಿ ಶ್ರೇಷ್ಠರಾದವರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:5
17 ತಿಳಿವುಗಳ ಹೋಲಿಕೆ  

ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.


ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.


ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.


ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.


ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.


“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’


ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.


ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು.


ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು