ನೆಹೆಮೀಯ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹಳೆಯದು ಎಂಬ ಬಾಗಿಲನ್ನು ದುರಸ್ತಿಮಾಡಿದವರು ಪಾಸೇಹನ ಮಗ ಯೋಯಾದನು ಹಾಗು ಬೆಸೋದ್ಯನ ಮಗ ಮೆಷುಲ್ಲಾಮನು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹಳೆಯದು ಎಂಬ ಬಾಗಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೋಯಾದ ಮತ್ತು ಮೆಷುಲ್ಲಾಮ್ ಹಳೆಬಾಗಿಲನ್ನು ಜೋಡಿಸಿದರು. ಯೋಯಾದನು ಪಾಸೇಹನ ಮಗ; ಮೆಷುಲ್ಲಾಮನು ಬೆಸೋದ್ಯನ ಮಗ. ಅವರು ತೊಲೆಗಳನ್ನು ಇಟ್ಟರು; ಬಾಗಿಲುಗಳನ್ನು, ಕದಗಳನ್ನು, ಅಗುಳಿಗಳನ್ನು ಜೋಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹಳೆಯದು ಎಂಬ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ, ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಧ್ಯಾಯವನ್ನು ನೋಡಿ |