Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿಂದ ನದಿಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್. ಇವರೂ, ಗಿಬ್ಯೋನ್ ಮತ್ತು ಮಿಚ್ಪ ಊರುಗಳವರೂ ಜೀರ್ಣೋದ್ಧಾರ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿಂದ ನದಿಯಾಚೆಯ ರಾಜ್ಯಪಾಲನ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ಮಿಚ್ಚ ಊರುಗಳವರು ದುರಸ್ತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿಂದ ಹೊಳೆಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ವಿುಚ್ಪ ಊರುಗಳವರೂ ಜೀರ್ಣೋದ್ಧಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿಂದ ಯೂಫ್ರೇಟೀಸ್ ನದಿಯ ರಾಜ್ಯಪಾಲನ ಅಧಿಕಾರದಲ್ಲಿರುವ ಸ್ಥಳಗಳಿಂದ ಗಿಬ್ಯೋನ್ ಮತ್ತು ಮಿಚ್ಪ ಊರುಗಳ, ಗಿಬ್ಯೋನಿನವನಾದ ಮೆಲೆಟ್ಯ, ಮೇರೊನೋತಿನವನಾದ ಯಾದೋನ್ ಇವರೂ, ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:7
7 ತಿಳಿವುಗಳ ಹೋಲಿಕೆ  

ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.


ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.


ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.


ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು