ನೆಹೆಮೀಯ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು, “ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ,” ಎಂದು ಪದೇ ಪದೇ ತಿಳಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ - ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ತಿಳಿಸಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅನ್ಯಜನರ ಮಧ್ಯೆ ವಾಸಿಸುವ ಯೆಹೂದ್ಯರು ನಮ್ಮ ಬಳಿಗೆ ಬಂದು ಹತ್ತು ಬಾರಿ ನಮಗೆ ತಿಳಿಸಿದರು. “ವೈರಿಗಳು ನಮ್ಮ ಸುತ್ತಮುತ್ತಲೂ ಇದ್ದಾರೆ. ನಾವು ಎತ್ತ ತಿರುಗಿದರೂ ಅಲ್ಲಿ ಅವರಿದ್ದಾರೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದು, “ನೀವು ತಿರುಗಿಕೊಳ್ಳುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಯುದ್ಧಕ್ಕೆ ಬಂದಾರು,” ಎಂದು ನಮಗೆ ಹತ್ತು ಬಾರಿ ಹೇಳಿದರು. ಅಧ್ಯಾಯವನ್ನು ನೋಡಿ |