ನೆಹೆಮೀಯ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು. ಅಧ್ಯಾಯವನ್ನು ನೋಡಿ |