ನೆಹೆಮೀಯ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು; ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ ಗುರಾಣಿ ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ದಿವಸದಿಂದ ನನ್ನ ಜನರು ಅರ್ಧಭಾಗ ಗೋಡೆಯ ಕೆಲಸದಲ್ಲಿ ನಿರತರಾದರು; ಉಳಿದ ಅರ್ಧ ಜನರು ಭರ್ಜಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಕಾವಲಾಗಿದ್ದರು; ಗೋಡೆಯನ್ನು ಕಟ್ಟುತ್ತಿದ್ದ ಯೆಹೂದದ ಜನರ ಹಿಂಭಾಗದಲ್ಲಿ ಸೈನ್ಯಾಧಿಕಾರಿಗಳು ನಿಂತುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಂದಿನಿಂದ ನನ್ನ ಸೇವಕರಲ್ಲಿ ಅರ್ಧ ಜನರು ಕೆಲಸದಲ್ಲಿ ನಿರತರಾದರು; ಮಿಕ್ಕ ಅರ್ಧ ಜನರು ಈಟಿಗಳನ್ನೂ, ಗುರಾಣಿಗಳನ್ನೂ, ಬಿಲ್ಲುಗಳನ್ನೂ, ಕವಚಗಳನ್ನೂ ಧರಿಸಿದರು. ಪ್ರಧಾನರು ಗೋಡೆ ಕಟ್ಟುವವರಾದ ಯೆಹೂದ ಮನೆಯವರ ಹಿಂದೆ ನಿಂತರು. ಅಧ್ಯಾಯವನ್ನು ನೋಡಿ |