Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:2
17 ತಿಳಿವುಗಳ ಹೋಲಿಕೆ  

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.


ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.


ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.


ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.


“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ


“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.


ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?


ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.


“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು