Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ನನ್ನ ನಡುಪಟ್ಟಿಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನನ್ನ ಉಡಿಲನ್ನು ಝಾಡಿಸಿ ಅವರಿಗೆ - ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ ಸ್ವಾಸ್ತ್ಯದಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಉಡಿಲಿನಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಕೂಡಲೆ ಸಭೆಯವರೆಲ್ಲಾ ಹಾಗೆಯೇ ಆಗಲಿ ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:13
17 ತಿಳಿವುಗಳ ಹೋಲಿಕೆ  

ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.


ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.


ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು