ನೆಹೆಮೀಯ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿ |