ನೆಹೆಮೀಯ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು. ಅಧ್ಯಾಯವನ್ನು ನೋಡಿ |