ನೆಹೆಮೀಯ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು. ಅಧ್ಯಾಯವನ್ನು ನೋಡಿ |