Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ದೇವರೇ, ನೀವು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ, ಸನ್ಬಲ್ಲಟನನ್ನೂ, ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:14
26 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು