Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಮುಗಿಯಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ತೀರಿತು. ಅದನ್ನು ಕಟ್ಟುವದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:15
7 ತಿಳಿವುಗಳ ಹೋಲಿಕೆ  

ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.


ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.


ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು