ನೆಹೆಮೀಯ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾದಾಗ ಅವರಲ್ಲಿ ಸನ್ಬಲ್ಲಟ್ ಗೆಷೆಮರು ನನಗೆ - ಓನೋ ತಗ್ಗಿನ ಹಕ್ಕೆಫಿರೀವಿುನಲ್ಲಿ ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸನ್ಬಲ್ಲಟನೂ, ಗೆಷೆಮನೂ ನನಗೆ, “ಓನೋ ಎಂಬ ಬಯಲಿನಲ್ಲಿರುವ ಗ್ರಾಮಗಳಲ್ಲಿ ಎದುರುಗೊಳ್ಳೋಣ ಬಾ,” ಎಂದರು. ಆದರೆ ಅವರು ನನಗೆ ಕೇಡು ಮಾಡಲು ಯೋಜಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |