ನೆಹೆಮೀಯ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದರಲ್ಲಿ, “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ನನ್ನ ಮೇಲೆ ದಾಳಿಮಾಡಬೇಕೆಂದಿದ್ದೀರಿ; ಆದುದರಿಂದಲೇ, ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ. ನೀನು ಅವರ ಅರಸನಾಗುವೆ ಎಂಬ ಸುದ್ದಿ ಜನರಲ್ಲಿ ಹಬ್ಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದರಲ್ಲಿ - ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ತಿರುಗಿಬೀಳಬೇಕೆಂದಿದ್ದೀರಿ; ಆದದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತೀ. ಮತ್ತು ನೀನು ಅವರ ಅರಸನಾಗುವಿಯೆಂಬ ಸುದ್ದಿಯು ಜನರಲ್ಲಿ ಹಬ್ಬಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದರಲ್ಲಿ ಹೀಗೆ ಬರೆದಿತ್ತು: “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ. ಅಧ್ಯಾಯವನ್ನು ನೋಡಿ |