Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಲ್ಲದೆ, ಜುದೇಯದಲ್ಲಿ ಒಬ್ಬ ಅರಸನಿದ್ದಾನೆಂದು ನಿನ್ನನ್ನು ಕುರಿತು ಜೆರುಸಲೇಮಿನಲ್ಲಿ ಪ್ರಕಟಿಸುವುದಕ್ಕಾಗಿ ಪ್ರವಾದಿಗಳನ್ನು ನೇಮಿಸಿರುವೆ ಎಂಬುದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟಲಿದೆ; ಆದುದರಿಂದ ಕೂಡಿ ಮಾತಾಡೋಣ ಬಾ,” ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆಂದು ನಿನ್ನನ್ನು ಕುರಿತು ಯೆರೂಸಲೇವಿುನಲ್ಲಿ ಪ್ರಕಟಿಸುವದಕ್ಕೋಸ್ಕರ ಪ್ರವಾದಿಗಳನ್ನು ನೇವಿುಸಿದ್ದಿ ಎಂಬದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟುವದು; ಆದದರಿಂದ ಕೂಡಿ ಮಾತಾಡೋಣ ಬಾ ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದೂ ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವುದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನಾಂಗಗಳಲ್ಲಿ ಸುದ್ದಿ ಉಂಟು. ಈಗ ಈ ವರ್ತಮಾನ ಅರಸನಿಗೆ ತಿಳಿಸಲಾಗುವುದು. ಆದಕಾರಣ ನಾವು ಕೂಡಿಕೊಂಡು ಯೋಚನೆ ಮಾಡಿಕೊಳ್ಳೋಣ ಬಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:7
10 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.


ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.


ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.


ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ.


ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.


ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.


ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು