Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ನಾನು, “ನೀನು ಬರೆದಂಥದ್ದು ಏನೂ ನಡೆದಿಲ್ಲ; ಅದನ್ನು ನೀನೆ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ - ನೀನು ಬರೆದಂಥದು ಏನೂ ನಡೆದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿದ್ದಿ ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಾನು, “ನೀನು ಹೇಳಿದ ಕಾರ್ಯಗಳಲ್ಲಿ ಯಾವುದೂ ಮಾಡಿದ್ದಿಲ್ಲ. ನೀವು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:8
12 ತಿಳಿವುಗಳ ಹೋಲಿಕೆ  

ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.


“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.


ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.


ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು