ನೆಹೆಮೀಯ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿ |