Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗೋಡೆಯನ್ನು ಕಟ್ಟಿ ತೀರಿಸಿದ ನಂತರ ನಾನು ಕದಗಳನ್ನು ಹಚ್ಚಿಸಿದೆನು; ದ್ವಾರಪಾಲಕರೂ ಗಾಯಕರೂ ಲೇವಿಯರೂ ನೇವಿುಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು; ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:1
12 ತಿಳಿವುಗಳ ಹೋಲಿಕೆ  

ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.


ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.


ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.


ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು