Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:2
21 ತಿಳಿವುಗಳ ಹೋಲಿಕೆ  

ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.


ಹೋಷೇಯ, ಹನನ್ಯ, ಹಷ್ಷೂಬ್,


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.


ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.


ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.


ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.


ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?


ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು