Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಸಾಧಾರಣಜನರನ್ನೂ ಖಾನೇಷುಮಾರಿಗೋಸ್ಕರ ಕೂಡಿಸಿದೆನು. ಆಗ [ಯೆರೂಸಲೇವಿುಗೆ] ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸುವ ಹಾಗೆ ಶ್ರೇಷ್ಠರನ್ನೂ, ಅಧಿಕಾರಸ್ಥರನ್ನೂ, ಸಾಮಾನ್ಯ ಜನರನ್ನೂ ಸಭೆಯಾಗಿಸೇರಲು, ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿಸಿದರು. ಆಗ ನಾನು ಮೊದಲು ಬಂದವರ ವಂಶಾವಳಿಯ ಪಟ್ಟಿಯನ್ನು ಕಂಡೆನು. ಅದರಲ್ಲಿ ಬರೆದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:5
15 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.


ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.


ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.


ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.


ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.


ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು