Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:70 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೆಬೇಕಾದ ದ್ರವ್ಯಸಹಾಯ ನೀಡಿದರು. ತಿರ್ಷಾತಾ ಎನಿಸಿಕೊಳ್ಳುವ ರಾಜ್ಯಪಾಲ ಭಂಡಾರಕ್ಕೆ ಕೊಟ್ಟದ್ದು - ಎಂಟು ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೋಸ್ಕರ ದ್ರವ್ಯಸಹಾಯಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು - ಸಾವಿರ ಬಂಗಾರದ ಪವನುಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು ಹತ್ತೊಂಭತ್ತು ಪೌಂಡು ಬಂಗಾರವನ್ನು. ಐವತ್ತು ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜಕರ ವಸ್ತ್ರಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:70
15 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.


ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.


ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.


ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,


ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.


ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.


ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.


ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.


ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು