Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:72 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

72 ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

72 ಉಳಿದ ಜನರು ಕೊಟ್ಟದ್ದು - ನೂರ ಅರವತ್ತೆಂಟು ಕಿಲೋಗ್ರಾಂ ಬಂಗಾರ; ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

72 ಉಳಿದ ಜನರು ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ಪವನುಗಳು, ಒಂದು ಲಕ್ಷ ತೊಲೆ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

72 ಒಟ್ಟು ಇತರರು ಮುನ್ನೂರ ಎಪ್ಪತ್ತೈದು ಪೌಂಡು ಬಂಗಾರ, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿ ಮತ್ತು ಅರವತ್ತೇಳು ಯಾಜಕರ ಬಟ್ಟೆಯನ್ನು ದಾನವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

72 ಮಿಕ್ಕಾದ ಜನರು ಕೊಟ್ಟದ್ದೇನೆಂದರೆ: 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ 1.1 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 67 ಯಾಜಕರ ಅಂಗಿಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:72
5 ತಿಳಿವುಗಳ ಹೋಲಿಕೆ  

ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ;


ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.


ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು